Breaking News

ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ

Spread the love

ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಗಣಿಗಾರಿಕೆ ವೇಳೆ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಮಂಜೂರು ಮಾಡಲಾಗಿದ್ದ ದೇವದಾರಿ ಅರಣ್ಯ ಪ್ರದೇಶದ ಭೂಮಿ ಹಸ್ತಾಂತರ ತಡೆಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ

ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ಮೊದಲು ಸಹಿ ಹಾಕಿ ಅನುಮತಿ ಪ್ರಸ್ತಾವನೆಗೆ ಹಿನ್ನಡೆಯಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಕೆಐಒಸಿಎಲ್ ಕಂಪನಿಯವರು ಹಿಂದೆ ಗಣಿಗಾರಿಕೆ ನಡೆಸುವಾಗ ಅನೇಕ ಷರತ್ತು ಉಲ್ಲಂಘಿಸಿ ನಿಯಮ ಗಾಳಿಗೆ ತೂರಿದ್ದಾರೆ. ಹೀಗಾಗಿ ದಂಡ ವಿಧಿಸಲಾಗಿದೆ. ಕಂಪನಿ ಷರತ್ತು ಪೂರೈಸುವವರೆಗೂ ಗಣಿಗಾರಿಕೆ ನಡೆಸಲು 41 ಎಕರೆ ಭೂಮಿಯನ್ನು ಹಸ್ತಾಂತರಿಸಬಾರದು ಎಂದು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಕೆಐಒಸಿಎಲ್ ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಿರಬಹುದು ಅಷ್ಟು ಮಾತ್ರ ಅವರ ಪಾತ್ರವಾಗಿದೆ. ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಭೂಮಿ ನೀಡುವಂತೆ ಕೆಐಒಸಿಎಲ್ 2018 ರ ಮಾರ್ಚ್ 16 ರಂದು ಮನವಿ ಸಲ್ಲಿಸಿತ್ತು. ಅದೇ ವರ್ಷ ಜುಲೈ 27ರಂದು ನೋಡಲ್ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದರು. 2020 ರ ಫೆಬ್ರವರಿ 18ರಂದು ಅರಣ್ಯ ಇಲಾಖೆ ಈ ವಿಚಾರವಾಗಿ ತನ್ನ ನಿಲುವನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದರೆ ನೈಸರ್ಗಿಕ ಕಾಡು ನಾಶವಾಗುತ್ತದೆ. ಜಲಮೂಲ ಹಾಗೂ ನೀರಿನ ಹರಿವಿಗೆ ಹಾನಿಯಾಗುವುದರಿಂದ ಗಣಿಗಾರಿಕೆಗೆ ಅನುಮೋದನೆ ನೀಡಬಾರದು ಎಂದು ವರದಿ ನೀಡಲಾಗಿದೆ. ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು 2020ರ ಅಕ್ಟೋಬರ್ 9ರಂದು ಅರಣ್ಯಾಧಿಕಾರಿಗಳು ನೀಡಿದ ಅಭಿಪ್ರಾಯವನ್ನು ಬದಿಗೊತ್ತಿ ಮೊದಲ ಹಂತದ ಗಣಿಗಾರಿಕೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ