ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ (Member Of Legislative Assembly) ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ (MLA Oath Ceremony) ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಕಾಲು ಮುಟ್ಟಿ ಆಶೀರ್ವಾದ ಪಡೆದರು.
ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ ವಚನ ಬೋಧಿಸಿದರು. ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಜೈ ಶ್ರೀರಾಮ್ ಎಂದು ಶಿಳ್ಳೆ ಕೇಕೆ ಹಾಕಿ ಬಿಜೆಪಿ ಸದಸ್ಯರು ಘೋಷಣೆ ಕೂಗಿ ಅಭಿನಂದಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೇರವಾಗಿ ಸಿಎಂ ಸಿದ್ದರಾಮಯ್ಯ ಬಳಿ ಬಂದ ಸಿ.ಟಿ ರವಿ, ಸಿದ್ದರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿದರು. ಈ ವೇಳೆ ಸಿಟಿ ರವಿಯ ಕಿವಿ ಹಿಂಡಿದ ಸಿಎಂ ಬೆನ್ನು ತಟ್ಟಿ ಅಭಿನಂದಿಸಿದರು.