ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದಾನೆ.
ಹಾಗೆಯೇ ಮುಂದಿನ ಮೂರು ಗಂಟೆಗಳ ಕಾಲ ಅಂದರೆ ಇನ್ನು ಕೆಲವೇ ಕ್ಷಣಗಳಲ್ಲಿ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಹಾಗೂ ಬೀದರ್, ಬೆಳಗಾವಿ ಭಾಗಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗೆಯೇ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ , ಚಿಕ್ಕಮಗಳೂರು , ಚಾಮರಾಜನಗರ , ಬೆಳಗಾವಿ , ಹಾಸನ , ಕೊಡಗು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.