Breaking News

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

Spread the love

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ, ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ವಿವಿಧೆಡೆ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಮಾರಾಟ ಮಾಡುತ್ತಿದ್ದು, ಸ್ಥಳೀಯ ಯುವಕರು ಹಾಗೂ ಗಂಡಸರು ದುಶ್ಚಟಕ್ಕೆ ದಾಸರಾಗಿದ್ದಾರೆ. ಇದರಿಂದ ಮಹಿಳೆಯರು ವಿಚಲಿತರಾಗಿದ್ದಾರೆ. ಕೂಡಲೇ ತಾಲ್ಲೂಕು ಆಡಳಿತ ಕ್ರಮ ವಹಿಸಬೇಕು. ಇಲ್ಲವಾದರೆ ನಾವೆಲ್ಲ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ