Breaking News

ಹಣ ದುರುಪಯೋಗ ಆರೋಪ : ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ‘FIR’ ದಾಖಲು

Spread the love

ಹಾಸನ : ಹಣ ದುರುಪಯೋಗ ಆರೋಪದ ಅಡಿ ಇದೀಗ ಸೂರಜ್ ರೇವಣ್ಣ ಆಪ್ತ ಎನ್ನಲಾದ ಶಿವಕುಮಾರ್ ವಿರುದ್ಧ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ​FIR ದಾಖಲಾಗಿದೆ.

ಹೌದು ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರ ನೀಡಿದ್ದ.

ಆದರೆ, ಆತ ಹಣಕ್ಕಾಗಿ ಅರೋಪಿಸಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದರು.ಹಣ ದುರುಪಯೋಗ ಆರೋಪ : ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ 'FIR' ದಾಖಲು

ಇದೀಗ ಹಣ ಆರೋಪದ ಅಡಿಯಲ್ಲಿ ಶಿವಕುಮಾರ್ ವಿರುದ್ಧವೆ ದಾಖಲಾಗಿದೆ. ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಾಗಿದೆ. ಆರೋಪಿ ಶಿವಕುಮಾರ್ ಶ್ರೀರಾಮ್ ಫೈನಾನ್ಸ್​ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ.

ಈ ವೇಳೆ ಆರು ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2 ಲಕ್ಷ 91 ಸಾವಿರ ರೂಪಾಯಿ ಹಣವನ್ನ ದುರ್ಬಳಕೆ ಮಾಡಿದ್ದ ಆರೋಪದಡಿ ಕೇಸ್​​ ದಾಖಲಾಗಿದ್ದು, ಈ ಕುರಿತು ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ದೂರು ನೀಡಿದ್ದರು. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ