Breaking News

ಪೋಕ್ಸೋ ಕೇಸ್‌: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾರ್ಜ್‌ಶೀಟ್‌

Spread the love

ಬೆಂಗಳೂರು(ಜೂ.28): ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ (ಪೋಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮೂವರು ಬೆಂಬಲಿಗರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಗುರುವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ. 

ಯಡಿಯೂರಪ್ಪ ವಿರುದ್ಧ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಹಾಗೂ ಸಂತ್ರಸ್ತೆಗೆ ಹಣದ ಆಮಿಷವೊಡ್ಡಿದ್ದ ಆರೋಪಗಳು ಸಾಬೀತಾಗಿವೆ ಎಂದು ಸಿಐಡಿ ಉಲ್ಲೇಖಿಸಿದೆ.

ಅದೇ ರೀತಿ ಯಡಿಯೂರಪ್ಪ ಅವರ ಬೆಂಬಲಿಗರಾದವೈ.ಎಂ.ಅರುಣ್, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಎಂ.ರುದ್ರೇಶ್ ಹಾಗೂ ಬೆಂಗಳೂರು ನಗರ ಜಿಪಂ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿರುದ್ಧ ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಮಾಡಿರುವುದು ತನಿಖೆಯಲ್ಲಿ ರುಜುವಾತಾಗಿದೆ ಎಂದು ಆರೋಪಪಟ್ಟಿಯಲ್ಲಿ ಸಿಐಡಿ ಅಧಿಕಾರಿಗಳು ಹೇಳಿದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ