Breaking News

ಪಾರಿವಾಳಗಳ ಹಿಕ್ಕೆಯಿಂದ ಮೈಸೂರು ಅರಮನೆಗೆ ಕಂಟಕ:

Spread the love

ಮೈಸೂರು, ಜೂನ್​​ 28: ಸಾಂಸ್ಕೃತಿಕ ನಗರಿ ಮೈಸೂರು (Mysore) ಅರಮನೆಗೆ (Mysore Palace) ಹೆಸರುವಾಸಿ. ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪಾರಿವಾಳಗಳ (Pigeon) ಹಿಕ್ಕೆಯಿಂದ ಕಂಟಕ ಎದುರಾಗಿದೆ. ಪಾರಿವಾಳಗಳು ಹಾಕುವ ಹಿಕ್ಕೆಯಲ್ಲಿ, ಯೂರಿಕ್ ಆ್ಯಸಿಡ್‌ (Uric Acid) ಇರುತ್ತದೆ. ಯೂರಿಕ್​ ಆಸ್ಯಡಿನಿಂದ ಕೂಡಿರುವ ಈ ಹಿಕ್ಕೆಗಳು ಪಾರಂಪರಿಕ ಕಟ್ಟಡಗಳ ಮೇಲೆ ಬೀಳುವುದರಿಂದ, ಕಟ್ಟಡಗಳು ವಿರೂಪಗೊಳ್ಳುತ್ತವೆ‌ ಎಂದು ಇತಿಹಾಸ ತಜ್ಞ ಪ್ರೋ. ರಂಗರಾಜು ಹೇಳಿದ್ದಾರೆ.

ಪ್ರೋ. ರಂಗರಾಜು, ಈ ಹಿಕ್ಕೆಗಳನ್ನು ತಾಮ್ರ ಅಥವಾ ಸ್ಟೀಲ್​ ಪಾತ್ರೆಯಲ್ಲಿ ಹಾಕಿ ಕೆಲವು ದಿನಗಳು ಬಿಟ್ಟರೆ, ರಂಧ್ರ ಬೀಳುತ್ತದೆ. ಮೈಸೂರಿನ ಹತ್ತನೇ ಚಾಮರಾಜ ವೃತ್ತ ಮತ್ತು ನಾಲ್ವಡಿ ಕೃಷ್ಣರಾಜ ವೃತ್ತಗಳನ್ನು ಮಾರ್ಬಲ್​ ಕಲ್ಲಿನಿಂದ ಮಾಡಲಾಗಿದೆ. ಈ ವೃತ್ತದಲ್ಲಿ ಪಾರಿವಾಳಗಳು ಹಿಕ್ಕೆ ಹಾಕುವುದರಿಂದ ಮಾರ್ಬಲ್​ಗೆ ಹಾನಿಯಾಗಲಿದೆ. ಈ ಹಿಕ್ಕೆಗಳಿಂದ ಅರಮನೆಗೆ ಬಹಳ ಮಾರಕವಾಗಲಿದೆ ಎಂದರು.

ಹೀಗಾಗಿ, ಅರಮನೆ, ಈ ವೃತ್ತಗಳ ಬಳಿ ಪಾರಿವಾಳಗಳಿಗೆ ಕಾಳು ಹಾಕುವುದನ್ನು ತಡೆಯಬೇಕು. ಈ ಬಗ್ಗೆ ಅನೇಕರು ಧ್ವನಿ ಎತ್ತಿದ್ದಾರೆ. ಈ ಪಾರಿವಾಳಗಳು ಅರಮನೆ, ರಾಜರ ವೃತ್ತಗಳಿಂದ ದೂರ ಹೋಗುವಂತೆ ಮಾಡಬೇಕು. ಪಾರಿವಾಳಗಳು ದೂರ ಹೋಗಬೇಕೆಂದರೆ ಕಾಳುಗಳನ್ನು ಹಾಕುವುದು ನಿಲ್ಲಿಸಬೇಕು. ಕೆಲವರೊಂತು ಪಾರಿವಾಳಗಳಿಗೆ ಹಾಕುವ ಕಾಳುನ್ನು ಅರಮನೆ ಅಕ್ಕ-ಪಕ್ಕ ಮಾರಾಟ ಮಾಡಲು ಆರಂಭಿಸಿದ್ದಾರೆ. ಇದನ್ನೂ ತಡೆಯಬೇಕು. ಅರಮನೆ ಸೇರಿ ಪಾರಂಪರಿಕ ಕಟ್ಟಡದ ರಕ್ಷಣೆಗೆ ಕ್ರಮ ವಹಿಸುವಂತೆ ಮನವಿ ಮಾಡಿದರು


Spread the love

About Laxminews 24x7

Check Also

ಪ್ರತಿದಿನ 120 ಕಿಲೋ ಮೀಟರ್ ಸೈಕಲ್ ಮೂಲಕ ಕ್ರಮಿಸುತ್ತ ಸಾಗುವ ಈತ ಯುವಕರಿಗೆ ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಸಂದೇಶ ನೀಡುತ್ತಿದ್ದಾನೆ.

Spread the love ಹರಿಯಾಣ ಮೂಲದವನು. ಕಲಿತಿದ್ದು ಕಡಿಮೆ ಆದರೂ ದೇಶಕ್ಕಾಗಿ ಯೋಚಿಸುವುದು ಹೆಚ್ಚು. ಈ ಹಿನ್ನೆಲೆ ಪ್ರತಿದಿನ 120 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ