Breaking News
Home / ರಾಜಕೀಯ / ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Spread the love

ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಾಗಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ.ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಗೋಕಾಕ | ನಕಲಿ ನೋಟು ಪತ್ತೆ: ಐವರ ಬಂಧನ

Spread the love ಗೋಕಾಕ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ