ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು.
ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯ ನಂತರವೂ ರಾಜ್ಯ ಸರ್ಕಾರದಿಂದ ಯಾವುದೇ ಭೂಮಿಯನ್ನು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿಲ್ಲ. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಅನುಷ್ಠಾನ ತುಂಬಾ ಅಗತ್ಯವಿದೆ. ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ನೈರುತ್ಯ ರೈಲ್ವೆ ಇಲಾಖೆಗೆ ಅಗತ್ಯವಿರುವ ಭೂಮಿಯನ್ನು ತ್ವರಿತವಾಗಿ ಹಸ್ತಾಂತರಿಸಲು ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಕ್ರಮಗಳನ್ನು ಪ್ರಾರಂಭಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು.
Laxmi News 24×7