Breaking News

ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ಬೆಳೆಸಿ:ಸವದಿ

Spread the love

ಥಣಿ: ‘ಗಿಡಗಳನ್ನು ಹಚ್ಚುವುದು ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಬಾರದು. ಗಿಡಗಳನ್ನು ನೆಟ್ಟು ಪೋಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗಿಡ ಬೆಳೆಸುವುದರಿಂದ ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಸಹಕಾರಿಯಾಗುತ್ತದೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ಬೆಳೆಸಿ: ಶಾಸಕ ಲಕ್ಷ್ಮಣ ಸವದಿ

ಇಲ್ಲಿನ ಆರ್.ಎಚ್.ಕುಲಕರ್ಣಿ ಸಭಾಂಗಣದಲ್ಲಿ ಅಥಣಿ ಮತ್ತು ಕಾಗವಾಡ ತಾಲ್ಲೂಕು ಸಹಕಾರಿ ಸಂಘಗಳ ಹಾಗೂ ವಿವಿಧ ಉದ್ದೇಶಗಳ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಬ್ಯಾಂಕ್‌ಗಳ ಒಕ್ಕೂಟದ ಆಶ್ರಯದಲ್ಲಿ ಗ್ರಾಮ ಗ್ರಾಮಗಳಲ್ಲಿ ಸಹಕಾರ ಸಂಘಗಳ ಮುಖಾಂತರ 5,000 ಸಸಿಗಳ ವಿತರಣೆ ಹಾಗೂ ಪರಿಸರ ಸಂರಕ್ಷಣಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಪ್ರತಿ ಗ್ರಾಮದಲ್ಲಿ ಎರಡರಿಂದ ನಾಲ್ಕು ಸಹಕಾರಿ ಸಂಘಗಳು ಇರುತ್ತವೆ. ಪ್ರತಿ ಸಂಘದ ಸದಸ್ಯರು ಮತ್ತು ಸಿಬ್ಬಂದಿ ಕನಿಷ್ಠ 10 ರಿಂದ 15 ಗಿಡಗಳನ್ನ ದತ್ತು ಪಡೆದು ತಮ್ಮ ಸಂಘದ ಆವರಣ, ಶಾಲೆ, ದೇವಸ್ಥಾನ, ರಸ್ತೆಬದಿ ಹೀಗೆ ಅನೇಕ ಸ್ಥಳಗಳಲ್ಲಿ ನೆಟ್ಟು, ಅವುಗಳನ್ನು ಪೋಷಿಸಬೇಕು’ ಎಂದರು.

ಬೆಳಗಾವಿಯ ಸಹಕಾರಿ ಸಂಘಗಳ ಸಂಯುಕ್ತ ನಿಬಂಧಕ ಡಾ.ಸುರೇಶ್ ಗೌಡ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಬೆಳದಂತೆ ಮಾನವ ತನ್ನ ಸ್ವಾರ್ಥಕ್ಕಾಗಿ ಗಿಡ-ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡಿದ್ದಾನೆ. ತಂತ್ರಜ್ಞಾನದ ಅನೇಕ ದುಷ್ಪರಿಣಾಮಗಳಿಂದ ಪರಿಸರದ ಮೇಲೆ ಪರಿಣಾಮವಾಗುತ್ತಿದೆ’ ಎಂದು ಹೇಳಿದರು.


Spread the love

About Laxminews 24x7

Check Also

ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ

Spread the loveರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ