Breaking News

ತೋಟಗಾರಿಕೆ ಬೆಳೆ ವಿಮೆ: 31 ಕೊನೆ ದಿನ

Spread the love

ಬ್ಯಾಡಗಿ: ತಾಲ್ಲೂಕಿನ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಅಡಿಕೆ, ಶುಂಠಿ, ಹಸಿ ಮೆಣಸಿನಕಾಯಿ ಹಾಗೂ ಮಾವು ಬೆಳೆಗಳಿಗೆ ಸರ್ಕಾರ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. 2024-25ನೇ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನವಾಗಿದೆ.

 

ಪ್ರತಿ ಹೆಕ್ಟೇರ್‌ ಅಡಿಕೆ ಬೆಳೆಗೆ ₹6,400, ಹಸಿಮೆಣಸಿನಕಾಯಿ ₹3,550, ಶುಂಠಿ ₹6,500, ಮಾವು ₹4,000 ದಂತೆ ವಿಮಾ ಕಂತನ್ನು ನಿಗದಿಪಡಿಸಿದೆ. ಇಚ್ಛೆಯುಳ್ಳ ಬೆಳೆ ಸಾಲ ಪಡೆಯದ ರೈತರು ಪಹಣಿ, ಬ್ಯಾಂಕ್‌ ಪಾಸ್‌ ಪುಸ್ತಕ, ಕಂದಾಯ ರಸೀದಿ ಹಾಗೂ ಆಧಾರ ಸಂಖ್ಯೆಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಬೆಳೆ ವಿಮೆ ತುಂಬಿದ ರೈತರು ಬೆಳೆ ಸಮೀಕ್ಷೆಯನ್ನು ಖುದ್ದಾಗಿ ಅಥವಾ ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಕಡ್ಡಾಯವಾಗಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ಎಚ್‌ಡಿಎಫ್‌ಸಿ ಅಗ್ರೋ ಇನ್ಸೂರನ್ಸ್‌ ಪ್ರತಿನಿಧಿ ಮೊ.81500 79660 ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ