ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು.
ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ.
ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು.
ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ ಹೊರ ತೆಗೆಯಲು ಅಲ್ಲಿಯ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ನಿನ್ನೆಯಷ್ಟೇ ಪುಣೆಯ ಲೋನಾವಾಲಾ ಬಳಿಯ ಭುಶಿ ಡ್ಯಾಂ ಹಿನ್ನೀರಿನಲ್ಲಿ7 ಮಂದಿ ನೀರುಪಾಲಾಗಿದ್ದರು. ಲೋನಾವಾಲಾ ದುರಂತ ಮಾಸುವ ಮುನ್ನವೇ ಈ ಘಟನೆ ನಡೆದಿರುವುದು ಗಡಿ ಭಾಗದಲ್ಲಿ ಆತಂಕ ಸೃಷ್ಡಿಸಿದೆ.
Laxmi News 24×7