ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ ಸಿಎಂ ಸಿದ್ದರಾಮಯ್ಯ ಮನವಿ; ಗೋವಾ ಆಕ್ರೋಶ!

Spread the love

ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಅನುಮೋದನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡಿದ ಮನವಿ ಬಿಜೆಪಿ ಆಡಳಿತವಿರುವ ಗೋವಾದ ವಿರೋಧ ಪಕ್ಷಗಳು ಮತ್ತು ಪರಿಸರವಾದಿಗಳನ್ನು ಕೆರಳಿಸಿದೆ.

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ ಸಿಎಂ ಸಿದ್ದರಾಮಯ್ಯ ಮನವಿ; ಗೋವಾ ಆಕ್ರೋಶ!

ಈ ಯೋಜನೆಯು ವನ್ಯಜೀವಿ ಮತ್ತು ಪರಿಸರಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಪ್ರತಿಪಾದಿಸುತ್ತಿರುವ ಗೋವಾದ ವಿರೋಧ ಪಕ್ಷಗಳು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಲು ಬಿಡದಂತೆ ಪ್ರಧಾನಿ ಮೇಲೆ ಒತ್ತಡ ಹೇರುವಂತೆ ತಮ್ಮ ಸರ್ಕಾರಕ್ಕೆ ಮನವಿ ಮಾಡಿವೆ.

ಪ್ರಧಾನಿ ಭೇಟಿ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳಸಾ- ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಅಗತ್ಯವಿರುವ ಅನುಮತಿ ನೀಡಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದರು. ಈ ಯೋಜನೆ ಕಿತ್ತೂರು-ಕರ್ನಾಟಕ ಪ್ರದೇಶದ ಜನರ ಕನಸಾಗಿದ್ದು, ಈ ಪ್ರದೇಶದ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದರು.

ಗೋವಾ ಜನರ ಜೀವನಾಡಿಯಾಗಿರುವ ಮಹದಾಯಿ ರಕ್ಷಣೆಗೆ ಪಣ ತೊಟ್ಟಿರುವ ಬಿಜೆಪಿ ಮತ್ತು ಗೋವಾ ಸರ್ಕಾರ ಕರ್ನಾಟಕ ಯೋಜನೆಗೆ ಮುಂದಾಗದಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಮೂಲಕ ಈ ಪ್ರದೇಶಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಗೋವಾದ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ವಿಪಕ್ಷ ನಾಯಕ ಯೂರಿ ಅಲೆಮಾವೋ, ಗೋವಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಮೋದಿಯನ್ನು ಭೇಟಿ ಮಾಡುತ್ತದೆ. ಕಳಸಾ-ಬಂಡೂರಿ ಯೋಜನೆಗೆ ಡಿಪಿಆರ್‌ನ ಅನುಮೋದನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರಧಾನಿ ಭೇಟಿಗೆ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಲು ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಎಂಬುದು ಅಚ್ಚರಿಯ ಸಂಗತಿ. ಗೋವಾ ಸರ್ಕಾರ ಜನರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಶೋಚನೀಯವಾಗಿ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ