ಬೆಂಗಳೂರು: ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ ಎಂದು ಕೆ ಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಇಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿ ಡಿಸಿಎ ಆಗುವ ಆಸೆ ನನಗೂ ಇಲ್ಲ, ರಮೇಶ ಅವರಿಗೂ ಇಲ್ಲ, ಇದು ಮಾಧ್ಯಮಗಳ ಸೃಷ್ಠಿ ಎಂದರು.
17 ಶಾಸಕರ ತ್ಯಾಗದಿಂದ ಸರ್ಕಾರ ಬಂದಿದೆ ಇದೇ ವಿಚಾರವನ್ನು ಹಲವು ಸಲ ಸಿಎಂ ಯಡಿಯೂರಪ್ಪ ಕೂಡ ಹೇಳಿದ್ದಾರೆ. ಇದೇ ವಿಚಾರವಾಗಿ ಇಂದು ದೆಹಲಿಗೆ ಸಿಎಂ ತೆರಳಿದ್ದಾರೆ. ಶೀಘ್ರದಲ್ಲೆ ಸಂಪುಟ ವಿಸ್ತರಣೆ ಗೊಂದಲಕ್ಕೆ ಅಂತ್ಯ ಹಾಡುತ್ತಾರೆ ಎಂದರು.

ಸಂಪುಟ ವಿಸ್ತರಣೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
![]()
Laxmi News 24×7