ಗೋಕಾಕ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ.
ಈಚೆಗೆ ಬೆಳಗಿನ ಜಾವ ಗಸ್ತು ಪೊಲೀಸರು ನಡೆಸಿದ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹ್ಮದಸಲೀಂ ಯಾದವಾಡ, ಮಹಾಲಿಂಗಪೂರದ ಸದ್ದಾಮ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ ಮತ್ತು ವಿಠ್ಠಲ ಹಣಮಂತ ಹೊಸಕೋಟಿ ಬಂಧಿತರು.
ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.
Laxmi News 24×7