Breaking News

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ

Spread the love

ಬೆಂಗಳೂರು: 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನ್ಯಾಯಾಲಯ ರದ್ದು ಮಾಡಿದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಪರೀಕ್ಷೆ ಮುಂದುವರೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

 

ರಾಜ್ಯ ಪಠ್ಯಕ್ರಮ ಅನುಸರಿಸುವ ರಾಜ್ಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024 -25 ನೇ ಶೈಕ್ಷಣಿಕ ವರ್ಷದಿಂದ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ -1 ಮತ್ತು ಮತ್ತು ಭಾಗ -2ರ ಆಧಾರದಲ್ಲಿ ಮೌಲ್ಯಂಕನ ಪೂರ್ಣಗೊಳಿಸಬೇಕು ಎಂದು ಹೇಳಲಾಗಿದೆ.

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಮೊದಲಾರ್ಧ ಶೇಕಡ 50ರಷ್ಟು ಪಠ್ಯ ಮತ್ತು ನಂತರದ ಅರ್ಧ ಶೇಕಡ 50ರಷ್ಟು ಪಠ್ಯದ ನಿಯಮವನ್ನು ಅನುಸರಿಸಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ