Breaking News

4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Spread the love

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ ತನಿಖೆಯಿಂದ ಹೊರಬಿದ್ದಿದೆ ಎನ್ನಲಾಗಿದೆ.

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

ಪ್ರಜ್ವಲ್‌ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಆರೋಪಕ್ಕೆ ಈ ಅಂಶ ಪುಷ್ಟಿ ನೀಡುವಂತಿದೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರ ಹಿಂದಿನ ಚಟುವಟಿಕೆ ಬಗ್ಗೆ ಕೆದಕಿದಾಗ ಈ ವಿಚಾರ ಮುನ್ನೆಲೆಗೆ ಬಂದಿದೆ.

ಪ್ರಜ್ವಲ್‌ ವಿರುದ್ಧ ಸಾಲು-ಸಾಲು ದೂರುಗಳು ದಾಖಲಾಗುತ್ತಿದ್ದಂತೆ ಅವರದ್ದು ಎನ್ನಲಾದ ಸದ್ಯ ವೈರಲ್‌ ಆಗಿರುವ ವೀಡಿಯೋಗಳ ಕುರಿತ ಮಾಹಿತಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕಲೆ ಹಾಕುತ್ತಿದೆ.

ಈ ಸಂಬಂಧ ಕೆಲವೊಂದು ತಾಂತ್ರಿಕ ಸಾಕ್ಷ್ಯದ ಜಾಡು ಹಿಡಿದು ಹೋದಾಗ ಪ್ರಜ್ವಲ್‌ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆ ನಡೆಸುತ್ತಿದ್ದ ಸಂಗತಿ ಕಂಡು ಬಂದಿದೆ.

ಆದರೆ ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾತ್ರ ಎಸ್‌ಐಟಿಯು ತನಿಖೆ ನಡೆಸುತ್ತಿದ್ದು ಈ ವೇಳೆ ಇಂತಹ ಕೆಲವು ಸಂಗತಿಗಳು ತನಿಖಾಧಿಕಾರಿಗಳ ಗಮನಕ್ಕೆ ಬಂದಿವೆ ಎನ್ನಲಾಗಿದೆ. ಮತ್ತೂಂದೆಡೆ ಕೆಲವು ಮಹಿಳೆಯರು ತಮ್ಮ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳಲು, ವಿವಿಧ ಆಮಿಷಕ್ಕೊಳಗಾಗಿ ಪ್ರಜ್ವಲ್‌ ರೇವಣ್ಣ ಜತೆಗೆ ಆತ್ಮೀಯವಾಗಿದ್ದರು. ಪ್ರಜ್ವಲ್‌ ತಾವು ಕೊಟ್ಟ ಮಾತಿನಂತೆ ಅವರಿಗೆ ಕೆಲವು ಸವಲತ್ತುಗಳನ್ನು ಕಲ್ಪಿಸಿಕೊಟ್ಟಿರುವ ಆರೋಪವೂ ಕೇಳಿ ಬಂದಿದೆ.


Spread the love

About Laxminews 24x7

Check Also

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

Spread the loveಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ