Breaking News

ವಿಶ್ವಕಪ್​ ಗೆದ್ದು ತಾಯ್ನಾಡಿಗೆ ಕಾಲಿಟ್ಟ ಟೀಮ್​ ಇಂಡಿಯಾ

Spread the love

ವದೆಹಲಿ: ಅಮೆರಿಕ ಮತ್ತು ವೆಸ್ಟ್​ಇಂಡೀಸ್​ ಜಂಟಿಯಾಗಿ ಆಯೋಜನೆ ಮಾಡಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಪ್ರತಿಷ್ಠಿತ ವಿಶ್ವಕಪ್​ ಗೆದ್ದು 13 ವರ್ಷಗಳ ಕಪ್​ ದಾಹವನ್ನು ನೀಗಿಸಿರುವ ಟೀಮ್​ ಇಂಡಿಯಾ ಇಂದು ಬೆಳಗ್ಗೆ ತವರಿಗೆ ಮರಳಿದೆ.

ವಿಶ್ವಕಪ್​ ಗೆದ್ದು ತಾಯ್ನಾಡಿಗೆ ಕಾಲಿಟ್ಟ ಟೀಮ್​ ಇಂಡಿಯಾಗೆ ಅದ್ಧೂರಿ ಸ್ವಾಗತ: ಪ್ರಧಾನಿ ಮೋದಿ ಭೇಟಿಗೆ ಸಿದ್ಧತೆ

ತಾಯ್ನಾಡಿಗೆ ಮರಳಿದ ರೋಹಿತ್​ ಶರ್ಮ ಪಡೆಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಿಂದ ವಿಶೇಷ ಏರ್​ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಟೀಮ್​ ಇಂಡಿಯಾ ಇಂದು (ಜುಲೈ 04) ಬೆಳಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಈ ವೇಳೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರಗಳು ಮೂಲಕ ಅದ್ಧೂರಿ ಸ್ವಾಗತ ಕೋರಿದರು. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ