Breaking News

ಭಾರೀ ಮಳೆ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲ್ಲೂಕುಗಳ ಶಾಲೆಗಳಿಗೆ ರಜೆ

Spread the love

ಡುಪಿ : ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಇಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ರಾಜ್ಯದ ಹಲವು ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ