Breaking News

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Spread the love

ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.

2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುನ್ನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

 

ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ (5-5-2022) ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಿತೇಶ್ ಪಾಟೀಲ ಅವರು, ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ