ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ.
ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದಾರೆ.
ಡೆಂಗ್ಯೂ ವಿರುದ್ಧವೇ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿದ್ದ ಅಧಿಕಾರಿಯೇ ಮೃತಪಟ್ಟಿದ್ದಾರೆ ಎಂಬುದು ವಿಪರ್ಯಾಸ. ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನಾಗೇಂದ್ರ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ತೀವ್ರ ನಿಗಾ ಘಟಕದಲ್ಲಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Laxmi News 24×7