Breaking News

1 ರಿಂದ 7ನೇ ತರಗತಿಯವರೆಗೂ ಆನ್​​ಲೈನ್​​ ಶಿಕ್ಷಣ ಇರುವುದಿಲ್ಲ:ಜೆ.ಸಿ ಮಾಧುಸ್ವಾಮಿ……..

Spread the love

ಬೆಂಗಳೂರು: ರಾಜ್ಯದಲ್ಲಿ 1 ರಿಂದ 7ನೇ ತರಗತಿಯವರೆಗೂ ಆನ್​​ಲೈನ್​​ ಶಿಕ್ಷಣ ಇರುವುದಿಲ್ಲ. 8 ಹಾಗೂ 9ನೇ ತರಗತಿಗಳಿ ಆನ್ ಲೈನ್ ಶಿಕ್ಷಣದ ಬಗ್ಗೆ ಇನ್ನೂ ನಿರ್ಧರಿಸಬೇಕಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಮಾಧುಸ್ವಾಮಿ ಮಕ್ಕಳಿಗೆ ಆನ್​​ಲೈನ್​​ ಶಿಕ್ಷಣ ನೀಡುವ ಸಂಬಂಧ ಪ್ರತಿಕ್ರಿಯಿಸಿದರು. 1-7ನೇ ತರಗತಿಯವರೆಗೂ ಮಕ್ಕಳಿಗೆ ಆನ್​ಲೈನ್​​ ಎಜುಕೇಷನ್​ ನೀಡದಿರಲು ಸಂಪಟುದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ ಇಲ್ಲ. ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿ ಪ್ರಕಾರ ಪರೀಕ್ಷೆ ನಡೆಯಲಿದೆ ಎಂದರು

ಮಕ್ಕಳಿಗೆ ಆನ್​ಲೈನ್​ ಶಿಕ್ಷಣ ಬೇಡ ಎಂಬ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ಎಲ್​​ಕೆ‌ಜಿ, ಯುಕೆಜಿ, 1-5ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಆನ್​ಲೈನ್​ ಶಿಕ್ಷಣ ನೀಡುವುದಿಲ್ಲ ಎಂದು ಪ್ರಾಥಮಿಕ ಸಚಿವ ಸುರೇಶ್​ ಕುಮಾರ್​ ನಿನ್ನೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಇದೀಗ 1 ರಿಂದ 7ರವರೆಗೂ ಆನ್​​ಲೈನ್​​ ಶಿಕ್ಷಣ ಇಲ್ಲ​ ಎಂದು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ಧಾರೆ.

ಸಾಕಷ್ಟು ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನಾನುಕೂಲವಾಗುವ ಕಾರಣಕ್ಕೆ 6 ಮತ್ತು 7 ತರಗತಿಗಳಿಗೆ ಆನ್ ಲೈನ್ ಶಿಕ್ಷಣ ಬೇಡ ಎಂದು ಸಂಪುಟ ಒಮ್ಮತದ ತೀರ್ಮಾನ ಮಾಡಿದೆ. 8ನೇ ತರಗತಿ ಹಾಗೂ 9ನೇ ತರಗತಿ ಆನ್ ಲೈನ್ ಕ್ಲಾಸ್ ನಡೆಯುತ್ತಿದ್ದು, ಇದನ್ನೂ ನಿಲ್ಲಿಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

https://youtu.be/r6bH1CgI-Qg


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ