Breaking News

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Spread the love

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

 

ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಹಗರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರನ ನೇರಕ್ಕೆ ನಡೆದಿರುವ ಹಗರಣವಾಗಿದೆ. ತರಾತುರಿಯಲ್ಲಿ ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡಿರುವುದು ಭ್ರಷ್ಟಾಚಾರದಲ್ಲಿ ತಾವು ಭಾಗಿ ಎಂಬುವುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ಬಹುದೊಡ್ಡ ಭ್ರಷ್ಟಾಚಾರವಾಗಿದೆ. ಇಡಿಒ ಹಗರಣ ಸಿದ್ದರಾಮಯ್ಯ ಅವರ ಗಮನಕ್ಕಿದೆ. 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗನ ಅನುಮತಿಯಿಲ್ಲದೆ ಇದು ನಡೆಯಲು ಸಾಧ್ಯವಿಲ್ಲ. ಸ್ವಂತ ಲಾಭ ಮಾಡಿಕೊಳ್ಳಲು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಏನು ಮಾಡಿಲ್ಲ ಅಂದರೆ ತರಾತುರಿಯಲ್ಲಿ ಜಿಲ್ಲಾಧಿಕಾರಿಯನ್ನು ಏಕೆ ವರ್ಗಾವಣೆ ಮಾಡಿದ್ದಿರಿ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಲೋಹಿಯಾವಾದಿ, ಸಮಾಜವಾದಿ ಅಂತ ಹೇಳಿಕೊಳ್ಳಲು ಅರ್ಹರಲ್ಲ. ಮುಡಾ ಮತ್ತು ಎಸ್.ಟಿ. ನಿಗಮದ ಹಗರಣದಲ್ಲಿ ನೇರವಾಗಿ ಸಿಎಂ ಭಾಗಿಯಾಗಿದ್ದಾರೆ ಎನ್ನುವುದು ನನ್ನ ಬಲವಾದ ಆರೋಪ. ಈ ಪ್ರಕರಣಗಳನ್ನು ಮುಚ್ಚಿ ಹಾಕಲು ಸರಕಾರ ಮುಂದಾಗಿದೆ. ಇಷ್ಟು ದಿನ ನಾಗೇಂದ್ರ ತಪ್ಪಿಸಿಕೊಳ್ಳಲು ಅವಕಾಶ ನೀಡಿ ಈಗ ನೋಟಿಸ್ ನೀಡಿದ್ದಾರೆ. ಭ್ರಷ್ಟಾಚಾರ ನಡೆಸಲು ಹೊಸ ಹೊಸ ಮಾರ್ಗ ಕಂಡುಕೊಳ್ಳುತ್ತಿದ್ದಾರೆ. ಹೇಗೆ ಭ್ರಷ್ಟಾಚಾರ ಮಾಡಬೇಕು ಎಂಬುವುದು ಮುಖ್ಯಮಂತ್ರಿಯವರಿಗೆ ಗೊತ್ತಿದೆ ಎಂದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ