Breaking News

ಮೈದುಂಬಿ ಹರಿಯುತ್ತಿರುವ ಶರಾವತಿ,

Spread the love

ಶಿವಮೊಗ್ಗ: ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ, ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ, ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ….. ಜೋಗ ಜಲಪಾತವನ್ನು ನೋಡುವಾಗಲೆಲ್ಲ ಕನ್ನಡದ ಖ್ಯಾತ ಕವಿ ನಿಸಾರ್ ಅಹ್ಮದ್ ಅವರ ನಿತ್ಯೋತ್ಸವ ಕವನದ ಸಾಲುಗಳು ಕನ್ನಡಿಗರಿಗೆ ನೆನಪಾಗುತ್ತವೆ. ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಜೊಗ ಜಲಪಾತ ಈಗ ರುದ್ರ ರಮಣೀಯವಾಗಿ ಪ್ರವಾಸಿಗರಿಗೆ ಕಾಣಿಸುತ್ತಿದೆ.

ನಿಸರ್ಗದ ಈ ದೃಶ್ಯ ವೈಭವ ನೋಡಲು ಎರಡು ಕಣ್ಣು ಸಾಲದು ಮಾರಾಯ್ರೇ. ಶರಾವತಿ
ನದಿಯು ಹಾಲ್ನೊರೆಯಂತೆ ಮೇಲಿಂದ ಕೆಳಭಾಗಕ್ಕೆ ಧುಮ್ಮಿಕ್ಕುತ್ತಿರುವ ದೃಶ್ಯ ಮನಸ್ಸಿಗೆ ಮುದ ನೀಡುವುದರ ಜೊತೆಗೆ ನಿಸರ್ಗದ ಅದ್ಭುತಗಳ ಬಗ್ಗೆ ಕೌತುಕಮ ಕುತೂಹಲ ಸೃಸ್ಟಿಸುತ್ತದೆ.

ಜೋಗದ ರಾಜ, ರಾಣಿ ಮತ್ತು ರೋರರ್ ಜಲಪಾತಗಳನ್ನು ಮಳೆಗಾಲದಲ್ಲೇ ನೋಡಿ ಅವುಗಳ ಸೌಂದರ್ಯವನ್ನು ಆಸ್ವಾದಿಸಬೇಕು. ಜನರಿಗೆ ಇದು ಚೆನ್ನಾಗಿ ಗೊತ್ತಿದೆ, ಹಾಗಾಗೇ ತಂಡೋಪತಂಡವಾಗಿ ಅವರು ಜೋಗದ ಕಡೆ ಧಾವಿಸುತ್ತಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ