Breaking News

ಕಾರ್‌ ಅಡ್ಡಗಟ್ಟಿ ₹10 ಲಕ್ಷ ಕಳವು

Spread the love

 ಕಿತ್ತೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳ ಬಳಿ ಕಾರ್‌ ಅಡ್ಡಗಟ್ಟಿ ₹10 ಲಕ್ಷ ಕಸಿದ ಕಳ್ಳರು ಪರಾರಿಯಾಗಿದ್ದಾರೆ.ಚನ್ನಮ್ಮನ ಕಿತ್ತೂರು: ಕಾರ್‌ ಅಡ್ಡಗಟ್ಟಿ ₹10 ಲಕ್ಷ ಕಳವು

ಬೆಳಗಾವಿ ಶಾಸ್ತ್ರೀನಗರದ ಹಾರ್ಡ್‌ವೇರ್ ಅಂಗಡಿ ಮಾಲೀಕ ಅಮಿತ್ ಅಶೋಕ ಪೇರಿವಾಲ ಅವರು ಶಿವಮೊಗ್ಗದ ಮಿತ್ರರಿಗೆ ₹10 ಲಕ್ಷ ಕೊಡಲು, ತಮ್ಮ ಅಂಗಡಿಯ ಕೆಲಸಗಾರ ಚಂದನಾಥ ರಾಮೇಶ್ವರ ಸಿದ್ ಹಾಗೂ ಸುನೀಲ ರಾಜಕುಮಾರ ಪ್ರಜಾಪತ್ ಅವರನ್ನು ಕಳುಹಿಸಿದ್ದರು.

ಅವರು ಸಾಗುತ್ತಿದ್ದ ಕಾರ್‌ ಅಡ್ಡಗಟ್ಟಿದ ಕಳ್ಳರು ಹಣ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಎಸ್.ಎನ್., ಡಿವೈಎಸ್‌ಪಿ ರವಿ ನಾಯಕ, ಪಿಎಸ್‌ಐ ಪ್ರವೀಣ ಗಂಗೊಳ ಸ್ಥಳ ಪರಿಶೀಲನೆ ನಡೆಸಿದರು. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ