ಬೆಳಗಾವಿ: ಇಲ್ಲಿನ ಮಹಾಂತೇಶ ನಗರದಲ್ಲಿ ಶನಿವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು, 150 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. ನಿವೃತ್ತ ಎಎಸ್‌ಐ ಮಹಾದೇವ ಬಾಗೋಡಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ.
‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡಿದ್ದೇವೆ.
ಕೆಲವು ಸುಳಿವು ಸಿಕ್ಕಿದ್ದು, ತ್ವರಿತವಾಗಿ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಮಾಳಮಾರುತಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ತಿಳಿಸಿದರು.