Breaking News

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌

Spread the love

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌ ಕಿಡಿ

ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಆರ್‌. ಅಶೋಕ್‌, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ.

ರೈತ ಹಂತಕ Indian National Congress – Karnataka ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ