Breaking News

ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ-CM

Spread the love

ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ-CM

ಬೆಂಗಳೂರು : ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ ಡಿಸಿಗಳು ಮಹಾರಾಜರಲ್ಲ , ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು.

ಬೀದಿಗಿಳಿದು ಕೆಲಸ ಮಾಡಬೇಕು. ರಾಜಕಾರಣಿಗಳು ಕೂಡ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂವನ್ನು ತಡೆಗಟ್ಟಬೇಕು ಎಂದರು.

ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪದಿಂದ ಕೆಲಸ ಮಾಡಿದ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಡಿಸಿ, ಡಿಹೆಚ್‌ಒ ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಬೇಕು ಎಂದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ