Breaking News

ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಅರ್ಜಿ ವಿಲೇ ಅವಧಿ 30 ದಿನಕ್ಕೆ ಇಳಿಕೆ.!

Spread the love

ಬೆಂಗಳೂರು: ಪಿಂಚಣಿ ಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು ಎಂದು ಸಿಎಂ ತಿಳಿಸಿದರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ, ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎನ್ನುವ ಸೂಚನೆ ನೀಡಿದ ಸಿಎಂ, ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದರು.

ಇನ್ನೂ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎನ್ನುವ ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಿಎಂ ನೀಡಿ, ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದರು

ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ. ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು. ರಾಜ್ಯದಲ್ಲಿ 2225 ಗ್ರಾಮಗಳು ಮತ್ತು 2038334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಸಂತ್ರಸ್ಥ. ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ