ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರಿನಿಸುವ ಮೂಲಕ ಚಾಲನೆ ನೀಡಿದರು.
ನಂತರ ವೈದ್ಯರು ಡೆಂಗ್ಯೂ ಕುರಿತು ಮುಂಜಾಗ್ರತಾ ಕ್ರಮಗಳನ್ನು ಜನತೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯರಾದ ಸರಸ್ವತಿ ತಂಬಾಕೆ , ಮಲ್ಲವ್ವಾ ನಾಯಕ್, ಬಿ ಬಿ ಈಶ್ವರಪ್ಪಗೋಳ,ಆರ್ ಬಿ ಬಸಾಪುರ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು
Laxmi News 24×7