Breaking News

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Spread the love

ಹೊಸದಿಲ್ಲಿ: ಮೇ 5ರಂದು ನಡೆದ ನೀಟ್‌-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯ ವ್ಯಾಪಕತೆ ಎಷ್ಟಿದೆ ಎಂಬುದನ್ನು ಅರಿತುಕೊಂಡ ಬಳಿಕವಷ್ಟೇ ನೀಟ್‌-ಯುಜಿ(ವೈದ್ಯ ಕೀಯ ಕಾಲೇಜುಗಳಿಗೆ ಪ್ರವೇಶ ಪಡೆ ಯುವ ಪರೀಕ್ಷೆ) ಪರೀಕ್ಷೆಯನ್ನು ರದ್ದು ಮಾಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು.

ನೀಟ್‌ ಪರೀಕ್ಷೆ ರದ್ದು ಕೋರ್ಟ್‌ನ ಕೊನೆಯ ಆಯ್ಕೆಯಾಗಿ ರುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

ನೀಟ್‌ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಸೋಮವಾರ ಕೈಗೆತ್ತಿಕೊಂಡಿದೆ. ಪ್ರಶ್ನೆಪತ್ರಿಕೆ ಯು ಟೆಲಿಗ್ರಾಮ್‌, ವಾಟ್ಸ್‌ಆಯಪ್‌ನಂಥ ಸಾಮಾಜಿಕ ಜಾಲತಾಣಗಳ ಮೂಲಕ ಆಗಿದ್ದರೆ, ಅದು ವ್ಯಾಪಕವಾಗಿರುತ್ತದೆ. ಈ ಕುರಿತು ಎಚ್ಚರಿಕೆಯ ಹೆಜ್ಜೆಯನ್ನಿಡಬೇಕಾದೆ ಎಂದು ಪೀಠ ಹೇಳಿತು.


Spread the love

About Laxminews 24x7

Check Also

ಡ್ರಗ್ಸ್ ದಂಧೆಕೋರರೊಂದಿಗೆ ಪೊಲೀಸರು ಶಾಮೀಲಾಗಿದ್ದು ಕಂಡುಬಂದ್ರೆ ಎಫ್ಐಆರ್ ದಾಖಲಿಸಿ ಸೇವೆಯಿಂದ ವಜಾ: ಜಿ. ಪರಮೇಶ್ವರ್

Spread the loveಬೆಳಗಾವಿ: ಡ್ರಗ್ಸ್ ಪಿಡುಗಿನ ವಿರುದ್ಧ ಸಮರ ಸಾರಿದ್ದು, ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಮಾದಕವಸ್ತು ಮಾರಾಟಕ್ಕೆ ಉತ್ತೇಜನ ನೀಡುವ ಸಿಬ್ಬಂದಿಗಳ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ