ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಲ್ಲಿ 51 ಮಂದಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಡೆಂಗ್ಯೂ ಸೋಂಕಿತರಿದ್ದಾರೆ.
ಪಶ್ಚಿಮ ಘಟ್ಟ ತಪ್ಪಲಿನ ಪ್ರದೇಶವಾದ ಈ ಎರಡು ತಾಲೂಕುಗಳಲ್ಲಿ ಕೆಲವು ಸಮಯಗಳ ಹಿಂದೆ ಮಂಗನ ಕಾಯಿಲೆ ಲಕ್ಷಣಗಳು ಕಂಡುಬಂದಿತ್ತು.
ಅನಂತರದ ದಿನಗಳಲ್ಲಿ ಮಳೆ ಹಾಗೂ ಬಿಸಿಲಿನ ವಾತಾವರಣಕ್ಕೆ ಜ್ವರ ಲಗ್ಗೆಯಿಟ್ಟಿತ್ತು. ಈ ಪೈಕಿ ಹೆಚ್ಚು ಡೆಂಗ್ಯೂ ಪ್ರಕರಣ ಕಂಡು ಬಂದಿರುವುದು ಕಾರ್ಕಳ ಪುರಸಭೆ ವ್ಯಾಪ್ತಿ ಹಾಗೂ ಗ್ರಾಮೀಣ ಭಾಗಗಳಾದ ಮಾಳ, ಕೆರ್ವಾಶೆ, ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯಲ್ಲಿ. ಡೆಂಗ್ಯೂ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಫಾಗಿಂಗ್ ಇತ್ಯಾದಿ ಸುರಕ್ಷಾ ಕ್ರಮಗಳನ್ನು ಕೈಗೊಂಡಿದೆ.