Breaking News

ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Spread the love

ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ.

ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದೆ.

ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ