ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪದಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರನನ್ನು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಅನೇಕರು ಕೊಳ್ಳೆ ಹೊಡೆದ ಆರೋಪದಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ನಿನ್ನೆಯಿಂದ ಇಡಿ ಅಧಿಕಾರಿಗಳು ನಾಗೇಂದ್ರ ಮನೆಯ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಸಧ್ಯ ಬಿ. ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದಿದೆ.
ಇ.ಡಿ ಅಧಿಕಾರಿಗಳ ಭರ್ಜರಿ ಬೇಟೆಯಲ್ಲಿ ಸಧ್ಯ ಸಿದ್ದು ಸರ್ಕಾರದ ಮಾಜಿ ಸಚಿವರೊಬ್ಬರ ಬಂಧನವಾಗಿದ್ದು ಇದು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಸಧ್ಯ ತಾನೇ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ.