ಕಮಲ್ ಹಾಸನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆದಿತ್ತು. ಈ ಬೆನ್ನಲ್ಲೇ ಅವರ ನಟನೆಯ ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿದೆ. ಆದರೆ, ಈ ಚಿತ್ರ ಹೀನಾಯ ಸೋಲು ಕಾಣುವ ಸೂಚನೆ ಸಿಕ್ಕಿದೆ.1996ರಲ್ಲಿ ರಿಲೀಸ್ ಆದ ‘ಇಂಡಿಯನ್’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿತ್ತು.
ಈ ಚಿತ್ರಕ್ಕೆ 28 ವರ್ಷಗಳ ಬಳಿಕ ಸೀಕ್ವೆಲ್ ರಿಲೀಸ್ ಆಗಿದೆ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ಈ ಚಿತ್ರವನ್ನು ನೋಡಲು ಹೋದ ಫ್ಯಾನ್ಸ್ಗೆ ಸಿಕ್ಕಿದ್ದು ಕೇವಲ ನಿರಾಸೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಶಂಕರ್ ಅವರು ಒಂದೊಳ್ಳೆಯ ಅವಕಾಶವನ್ನು ತಪ್ಪಿಸಿಕೊಂಡರು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.
ನಿರ್ದೇಶಕ ಎಸ್. ಶಂಕರ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅದೇ ರೀತಿ ಕಮಲ್ ಹಾಸನ್ಗೆ ಇರುವ ಬೇಡಿಕೆ ದೊಡ್ಡದು. ಇಬ್ಬರೂ ಒಂದಾಗುತ್ತಿದ್ದಾರೆ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಆದರೆ, ಜನರ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿ ಬಂದಿಲ್ಲ. ಈ ಬಗ್ಗೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಹೀಗಾಗಿ, ಅವರು ಕೂಡ ಸಿನಿಮಾನ ಉಳಿಸೋಕೆ ಸಾಧ್ಯವಿಲ್ಲ ಎಂಬುದು ಸಿನಿಪ್ರಿಯರ ಅಭಿಪ್ರಾಯ. ಅವರ ಸಿನಿಮಾಗೆ ಗಟ್ಟಿತನ ಇಲ್ಲ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.
Laxmi News 24×7