Breaking News

ಜಿಎಸ್‌ಟಿ ವಂಚನೆ: ಉದ್ಯಮಿಗಳಿಗೂ ಕಂಟಕ

Spread the love

ಬೆಳಗಾವಿ: ಬೆಳಗಾವಿ ಕೇಂದ್ರಿತವಾಗಿ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಪ್ರಕರಣದಲ್ಲಿ ರಾಜ್ಯದ ದೊಡ್ಡ ಉದ್ಯಮಿಗಳು, ಪ್ರಭಾವಿಗಳು ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪ್ರಕರಣದ ಆರೋಪಿ ಒಬ್ಬನೇ ಇದ್ದರೂ ಆತ ಹಲವು ಪ್ರಭಾವಿಗಳ ಹೆಸರು, ಜಿಎಸ್‌ಟಿ ಸಂಖ್ಯೆಗಳನ್ನು ಅಕ್ರಮಕ್ಕೆ ಬಳಸಿದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಬೆಳಗಾವಿ | ಜಿಎಸ್‌ಟಿ ವಂಚನೆ: ಉದ್ಯಮಿಗಳಿಗೂ ಕಂಟಕ

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ನಕೀಬ್ ನಜೀಬ್ ಮುಲ್ಲಾ (24) ಎಂಬ ಆರೋಪಿಯನ್ನು ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ₹132 ಕೋಟಿಯ ನಕಲಿ ವ್ಯವಹಾರದ ದಾಖಲೆ ಸೃಷ್ಟಿಸಿರುವ ಆರೋಪಿ, ₹23.82 ಕೋಟಿ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ಐಟಿಸಿ) ಸರ್ಕಾರದಿಂದ ಪಡೆದಿದ್ದು ಗೊತ್ತಾಗಿದೆ. ಈತನ ಮೂಲಕ ತೆರಿಗೆ ಸಂದಾಯ ಮಾಡಿದ ಎಲ್ಲರಿಗೂ ಸಂಕಷ್ಟ ತಲೆದೋರಿದೆ.

ಜಿಎಸ್‌ಟಿ ಇಲಾಖೆಯ ಬೆಳಗಾವಿ ವಲಯ ವ್ಯಾಪ್ತಿಗೆ ಬರುವ 12 ಜಿಲ್ಲೆಗ ಹಲವಾರು ದೊಡ್ಡ ಉದ್ಯಮಿಗಳು ಈ ಆರೋಪಿ ಮೂಲಕ ಜಿಎಸ್‌ಟಿ ಕಟ್ಟಿದ್ದಾರೆ. ಅವರಲ್ಲಿ ಹಲವರು ಪ್ರಾಮಾಣಿಕವಾಗಿ ಹಣ ಕೊಟ್ಟಿದ್ದಾರೆ. ಆದರೆ, ಅದನ್ನು ಇಲಾಖೆಗೆ ತಲುಪಿಸದೇ ‘ಜಿಎಸ್‌ಟಿ ತಲುಪಿದೆ’ ಎಂಬ ಸುಳ್ಳು ದಾಖಲೆ ಸೃಷ್ಟಿಸಿ ಅವರಿಗೂ ವಂಚಿಸಿದ ಎಂಬುದು ತಿಳಿದು ಬಂದಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ