ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಯಲ್ಲಪ್ಪಾ ಬಂಗೆಣ್ಣವರ, ರಾಮಪ್ಪಾ ಬಂಡಿ, ವಿಠ್ಠಲ ನಂದಿ, ಪ್ರಕಾಶ ಮಾಳೆದ, ನಿಂಗಪ್ಪ ವಡ್ಡರಗಾಂವಿ, ಲಕ್ಕಪ್ಪಾ ಸಿ ಬಂಡಿ ಯಲಪ್ಪಾ ಕೆ ನಂದಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
ದಿನಾಂಕ 13/07/2024
https://www.facebook.com/share/r/Xn8SNXciccAEUzWT/?mibextid=qi2Omg