Breaking News

ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ:

Spread the love

ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ

 

ಬೆಂಗಳೂರು, ಜುಲೈ 13: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು.

ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ: ಸಿದ್ದರಾಮಯ್ಯ

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಲಚೇತನರ ಬಳಿಗೆ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು “ಕಾರ್ಯಕರ್ತರ ಎಲ್ಲಾ ಅಹವಾಲುಗಳನ್ನು ವಿಂಗಡಿಸಿ ನನಗೆ ನೀಡಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಾವು ಕಾಂಗ್ರೆಸ್ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಾ ಇದ್ದೇವೆ ನಮಗೆ ಮನೆ ಕೊಡಿ ಎಂದು ಜಯಂತಿ, ಅರ್ಚನಾ, ಸುಗಂಧಿ, ಆಶಾ, ಸಂಧ್ಯಾ ಅವರು ಮನವಿ ಸಲ್ಲಿಸಿದಾಗ “ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಾ ಇದ್ದೀರಾ. ನಿಮಗೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿ ಮನೆ ನೀಡುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ” ನೀಡಿದರು.

ಶೇ.90 ರಷ್ಟು ನಿಗಮ ಮಂಡಳಿಯ ಅಧ್ಯಕ್ಷರನ್ನು ನೇಮಕಾತಿ ಮಾಡಲಾಗಿದೆ. ಸುಮಾರು 10-15 ಮಂಡಳಿಗಳಿಗೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಅವರು ಸೇರಿ ಚರ್ಚೆ ನಡೆಸಿ ನೇಮಕಾತಿ ಮಾಡುತ್ತೇವೆ. ಈಗಾಗಲೇ ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಸಮಿತಿಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಒಂದಷ್ಟು ಮಂಡಳಿಗಳಲ್ಲಿ ನಿರ್ದೇಶಕ ಸ್ಥಾನಕ್ಕೆ ಅವಕಾಶ ಮಾಡಿಕೊಡಲಾಗಿದೆ” ಎಂದು ಹೇಳಿದರು. ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ