Breaking News

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ

Spread the love

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ

 

ಮುಧೋಳ: ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ ಹುಟ್ಟಿಸಿದ್ದು ಜನರು ಮನೆಯಿಂದ ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.
ಕಳೆದ ಹಲವು ದಿನಗಳಿಂದ ಜಮೀನುಗಳಲ್ಲಿ‌ ಪ್ರತ್ಯಕ್ಷವಾಗಿರುವ ಚಿರತೆ ಮೇಯಲು ಬಿಟ್ಟ ಎಮ್ಮೆ, ಕರುಗಾಲ ಮೇಲೆ‌ ದಾಳಿ‌ ನಡೆಸಿದ್ದು ಚಿರತೆ ಕಾಟದಿಂದ ಗ್ರಾಮದ ಜನ ರೋಸಿ ಹೋಗಿದ್ದಾರೆ.

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ. ಅಧಿಕಾರಿಗಳಿಂದ ಕಾರ್ಯಾಚರಣೆ

ಯಡಹಳ್ಳಿ‌ ಚಿಂಕಾರ ರಕ್ಷಿತಾರಣ್ಯಕ್ಕೆ‌ ಹೊಂದಿಕೊಂಡಿರುವ ಕಿಶೋರಿ ಗ್ರಾಮದ ಜಮೀನುಗಳಲ್ಲಿ ಓಡಾಡುತ್ತಿರುವ ಚಿರತೆ ನಾಯಿಯೊಂದನ್ನು ಕೊಂದು ತಿಂದಿದ್ದು, ಅರ್ಧ ಕಳೇಬರವನ್ನು ಕಬ್ಬಿನ ಜಮೀನಿನಲ್ಲಿ ಬಿಟ್ಟು ಪರಾರಿಯಾಗಿದೆ. ಚಿರತೆ ಕಾಟದಿಂದ ಕಂಗಾಲಾಗಿರುವ ಕಿಶೋರಿ ಹಾಗೂ ಸುತ್ತಲಿನ ಗ್ರಾಮಸ್ಥರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ.

ಚಿರತೆ ಸೆರೆಯಲು ಮುಂದಾಗಿರುವ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಕಿಶೋರಿ-ಮೆಳ್ಳಿಗೇರಿ ಗ್ರಾಮದ ಸರಹದ್ದಿನಲ್ಲಿ ಶುಕ್ರವಾರದಿಂದ ಕೋಂಬಿಂಗ್ ಆರಂಭಿಸಿದ್ದಾರೆ ಆದರೆ ಇದುವರೆಗೆ ಚಿರತೆ ಮಾತ್ರ ಪತ್ತೆಯಾಗಿಲ್ಲ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ