ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ದುರ್ಮರಣ

Spread the love

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ನಡೆದಿದೆ.

ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), ಕಲ್ಮೇಶ ಮಾನೋಜಿ (26) ಮೃತ ದುರ್ದೈವಿಗಳು.

ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ.

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ದುರ್ಮರಣ

7 ಯುವಕರು ಸ್ವಿಫ್ಟ್ ಕಾರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಶಿಗ್ಗಾಂವಿ ಬಳಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ ನೀಲಪ್ಪ ಹಾಗೂ ಸುದೀಪ್ ಕೋಟಿ ಸಾವನ್ನಪ್ಪಿದ್ದರು. ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ