Breaking News

ಗ್ಯಾರಂಟಿ ಯೋಜನೆʼಗಳಿಗೆ ʻSCP, TSPʼ ಅನುದಾನ ಬಳಸಿದ್ದು ನಿಜ : ಪಲ್ಲವಿ.ಜಿ

Spread the love

ಬೆಳಗಾವಿ : ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್‌ ಸಿಪಿ, ಟಿಎಸ್‌ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಹೇಳಿದ್ದಾರೆ.

 

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ (ಜು.13) ನಡೆದ ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ಕೆಲವು ದೂರುಗಳು ಬರುತ್ತಿವೆ. ಹಾಗಾಗಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ಯೋಜನೆಗಳ ಸೌಲಭ್ಯ ಫಲಾನುಭವಿಗೆ ದೊರೆಯುವಂತೆ ಎಲ್ಲ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು ಎಂದು ತಿಳಿಸಿದರು.

ಇಲಾಖೆ ಯೋಜನೆಗಳಿಗಾಗಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ತರಬೇಕು. ಸಭೆಗೆ ಮುಂಚಿತವಾಗಿ ಎಲ್ಲಾರಿಗೂ ಸಭೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ದಾಖಲಾತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದ ಅಲೆಮಾರಿಗಳ, ಅರೆ ಅಲೆಮಾರಿ ಜನನಗಳ ಅಂಕಿ ಅಂಶಗಳನ್ನು ಮಾಹಿತಿಗಾಗಿ ಸಂಗ್ರಹಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಕೆಲವು ಬ್ಯಾಂಕ್ ಸಾಲ ಸೌಲಭ್ಯ ನೀಡುವುದಿಲ್ಲ ಅಂತಹ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ನಿರ್ದೇಶನ ನೀಡುವಂತೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ