Breaking News

ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್

Spread the love

ಬೆಂಗಳೂರು,ಜು.14- ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್

ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ.

ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ಮಾಹಿತಿಗಳನ್ನು ಪಡೆದಿದ್ದಾರೆ ಎಂದು ಗೊತ್ತಾಗಿದೆ.

ಹಣ ಎಲ್ಲಿಂದ, ಯಾರಿಗೆ ಹೋಯಿತು, ಯಾವುದಕ್ಕೆ ಉಪಯೋಗಿಸಲಾಯಿತು ಎಂಬಿತ್ಯಾದಿ ಪ್ರಶ್ನೆಗಳ ಮೂಲಕ ಮಾಹಿತಿಗಳನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ