Breaking News

ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ

Spread the love

ಬೆಂಗಳೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ

ತಲೆಮರೆಸಿಕೊಂಡಿರುವ ದದ್ದಲ್‌ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ.

ಬಸನಗೌಡ ದದ್ದಲ್‌ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌‍ಐಟಿ ಅಧಿಕಾರಿಗಳು ಸೂಚಿಸಿದ್ದರು. ನಂತರ ಅವರು ನಾಪತ್ತೆಯಾಗಿದ್ದಾರೆ.

ಇಡಿ ಅಧಿಕಾರಿಗಳು ಅವರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಬೆಂಗಳೂರಿನ ಯಲಹಂಕದಲ್ಲಿರುವ ಅವರ ನಿವಾಸ, ಕಚೇರಿಯಲ್ಲಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮಂತ್ರಾಲಯ ಮಾರ್ಗವಾಗಿ ಹೈದರಾಬಾದ್‌ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಜಾಡು ಹಿಡಿದಿರುವ ಇಡಿ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ