ಹುಬ್ಬಳ್ಳಿ, ಜುಲೈ 14: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು.
ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಅವರು ರೌಡಿ ಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ ತಾವು ಯಾವ ರಾಜಕಾರಣಿಗಳ ಒತ್ತಡಕ್ಕೂ ಮಣಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.