ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Spread the love

ಲಬುರಗಿ : ಕೃಷಿ ಜಮೀನೊಂದರಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಇದೀಗ ಹಳೆ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರರಬಹುದೆಂದು ಶಂಕೆ ವ್ಯಕ್ತವಾಗುತ್ತಿದೆ.

ಹೌದು ಕಲಬುರಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ನಾಗೂರ ಗ್ರಾಮದ ಖಾಸಗಿ ಕೃಷಿ ಜಮೀನಿನ ದಂಡೆಯಲ್ಲಿ ಅರ್ಧ ಸುಟ್ಟಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಒಂದು ದಿನ ಹಿಂದೆ ಈ ಕೊಲೆ ನಡೆದಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ.ಕಲಬುರ್ಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಹತ್ಯೆಗೈದು ಬೆಂಕಿ ಹಚ್ಚಿರುವ ಶಂಕೆ

ಕೊಲೆಯಾದ ಮಹಿಳೆಯ ವಿಳಾಸ ಮತ್ತು ಗುರುತು ಪತ್ತೆಯಾಗಿಲ್ಲ. ಆರೋಪಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ದುಷ್ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಪಿಎಸ್‌ಐ ಆಶಾ ರಾಠೋಡ, ಕಮಲಾಪುರ ಸಿಪಿಐ ವಿ.ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ