Breaking News

ಮೆಡಿಕಲ್ ಸೀಟು ಕೊಡಿಸುವುದಾಗಿ ಕೋಟಿ ರೂ. ವಂಚನೆ ; ವಂಚಕನ ಹೆಡೆಮುರಿ ಕಟ್ಟಿದ ಬೆಳಗಾವಿ ಪೊಲೀಸ್

Spread the love

ದೇಶದಲ್ಲೇ ಸದ್ದು ಮಾಡಿದ ನೀಟ್ ಪರೀಕ್ಷೆ ಅಕ್ರಮ ಒಂದು ಕಡೆಯಾದರೆ, ಇದನ್ನೇ ಬಂಡವಾಳ ಮಾಡಿಕೊಂಡ ಐನಾತಿ ಓರ್ವ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ

ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ, ಕೋಟ್ಯಾಂತರ ರೂಪಾಯಿ ಎಗರಿಸಿ ಪರಾರಿಯಾಗಿದ್ದ ಅಂತರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಹೆಡೆಮೂರಿ ಕಟ್ಟಿದ್ದಾರೆ.‌

 

 

ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವದಾಗಿ ನಂಬಿಸಿ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿದ್ದಾನೆ. ಅವರಿಂದ ಸುಮಾರು 1,30,41,884

ರೂಪಾಯಿ ಎಗರಿಸಿ ಪರಾರಿಯಾಗಿದ್ದಾನೆ. ಇದರ ಜಾಡು ಹೀಡಿದ ಪೊಲೀಸರ ತಂಡ ಆರೋಪಿಯನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ

ಈ ದೃಷ್ಯಗಳಲ್ಲಿ ಕಾಣುತ್ತಿರುವ ಹಾಗೆ ಕಂತೆ ಕಂತೆ ನೋಟುಗಳು, ಲಾಪ್ ಟಾಪ್, ಮೋಬೈಲ್ ಫೋನ್ ಹಾಗೂ ಕಂಪ್ಯೂಟರ್ ಗಳನ್ನು ಇಟ್ಟಿಕೊಂಡ ತೇಲಂಗಾಣ ಮೂಲದ ಅರಗೊಂಡ

ಅರವಿಂದ ಅಲಿಯಾಸ್ ಅರುಣಕುಮಾರ (43) ಖಂದೀಮನನ್ನು ಬಂಧಿಸಿರುವ ಪೊಲೀಸರು ಅವನಿಂದ 12 ಲಕ್ಷ ಹಣ ಹಾಗೂ 12,66,900 ಬೆಲೆಯ ವಸ್ತುಗಳನ್ನು ಸೀಜ್ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ