ಬೆಂಗಳೂರು: ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ 48 ಸೈಟುಗಳು ಹಂಚಿಕೆಯಾಗಿವೆ ಎಂದು ಯಡಿಯೂರಪ್ಪನವರು ಹೇಳಿದ್ದರು ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ಮಾರ್ಚ್ 17ರಂದು ವಿಧಾನಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ 48ಸೈಟುಗಳು ಮತ್ತು ಈಗ ಕೇಂದ್ರ ಸಚಿವರಾಗಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ 300 X 200ಚದರ ಅಡಿ ಸೈಟು ಹಂಚಿಕೆಯಾಗಿರುವ ಸಂಗತಿಯನ್ನು ಹೇಳಿದ್ದರು ಎಂದು ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ಅಕ್ರಮವಾಗಿ 14 ನಿವೇಶನನಗಳು ಹಂಚಿಕೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.