Breaking News

ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಿಲ್ಲ : ಸಚಿವ ರಾಮಲಿಂಗಾರೆಡ್ಡಿ

Spread the love

ಬೆಂಗಳೂರು,ಜು.15- ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ರಾಜು ಕಾಗೆ ಅವರು, ಪೆಟ್ರೋಲ್, ಡೀಸೆಲ್ ದರದ ಏರಿಕೆ ನಂತರ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ.

ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಈಗ ಈ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಹೇಳಿಕೆಗೆ ಸಚಿವರು ಅಸಮತಿ ಸೂಚಿಸಿದರು.ಅಧ್ಯಕ್ಷರಾಗಿ ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಆದರೆ ಸಚಿವನಾಗಿ ನನ್ನ ಮುಂದೆ ಯಾವುದೇ ಪ್ರಸ್ತಾಪಗಳಿಲ್ಲ. ಒಂದು ವೇಳೆ ಅಂತಹ ಪ್ರಸ್ತಾಪಗಳು ಬಂದರೆ ಪರಿಶೀಲಿಸುವುದಾಗಿ ಹೇಳಿದರು. ಈ ಮೂಲಕ ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಸಚಿವರು ತಳ್ಳಿ ಹಾಕಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲೆ ಮಾರಾಟ ತೆರಿಗೆ ಏರಿಕೆ ಮಾಡಿದ ಬಳಿಕ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಬಿಜೆಪಿಯವರು ಹೇಳುತ್ತಿರುವಂತಹ ಹಗರಣ ನಡೆದಿರುವುದು 2021 ರಲ್ಲಿ. ಆಗ ಮುಖ್ಯಮಂತ್ರಿಯಾಗಿದ್ದುದು ಬಿ.ಎಸ್.ಯಡಿಯೂರಪ್ಪ ಅವರು. ಸಾರಿಗೆ ಸಚಿವರು, ಮುಡಾ ಅಧ್ಯಕ್ಷರಾಗಿದ್ದವರೂ ಕೂಡ ಬಿಜೆಪಿ ನಾಯಕರು. ಸಿದ್ದರಾಮಯ್ಯನವರು ತಮ್ಮ ಜಮೀನಿಗೆ ಪರಿಹಾರ ಕೇಳಿದ್ದಾರೆ. ಬಿಜೆಪಿಯವರು ನಿಯಮ ಬಾಹಿರವಾಗಿ ನಿವೇಶನಗಳನ್ನು ಕೊಟ್ಟಿದ್ದರೆ ಅದು ಅವರೇ ಮಾಡಿದ ತಪ್ಪು. ಅದಕ್ಕೆ ನಮ್ಮ ಸರ್ಕಾರ ಹೊಣೆಯಲ್ಲ ಎಂದರು.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ