Breaking News

ಗಾಯಗೊಂಡ ನವಿಲಿಗೆ ಚಿಕಿತ್ಸೆ

Spread the love

ಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಸಲಾಮವಾಡಿ ಗ್ರಾಮದ ಜಮೀನಿನಲ್ಲಿ ಗಾಯಗೊಂಡು ಹಾರಲಾರದೆ ಒದ್ದಾಡುತ್ತಿದ್ದ ನವಿಲನ್ನು ರೈತ ಉತ್ತಮ ಪಾಟೀಲ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಎಂದಿನಂತೆ ಕೆಲಸಕ್ಕಾಗಿ ಉದಯ ಹೊಲಕ್ಕೆ ಬಂದರು. ಆಗ ಕಾಲಿಗೆ ಪೆಟ್ಟಾಗಿದ್ದರಿಂದ ನವಿಲು ಹಾರಲಾಗದೆ ಒದ್ದಾಡುತ್ತಿರುವುದು ಕಂಡುಬಂತು.

Peacock ಗಾಯಗೊಂಡ ನವಿಲಿಗೆ ಚಿಕಿತ್ಸೆ

ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ದಡ್ಡಿ ಗ್ರಾಮದ ಪಶು ಚಿಕಿತ್ಸಾಲಯಕ್ಕೆ ನವಿಲು ತೆಗೆದುಕೊಂಡು ಹೋಗಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು.

ನಂತರ ಅರಣ್ಯ ಇಲಾಖೆ ಅಧಿಕಾರಿಗಳಾದ ಪ್ರಸನ್ನ ಬೆಲ್ಲದ, ಪ್ರಭು ತಗಡಿ, ರಮೇಶ ಕಮತೆ ಅವರು, ನವಿಲನ್ನು ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬಿಟ್ಟು ಬಂದರು.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ