Breaking News

ಸಿಎಂ ಎರಡು ದೂರು ದಾಖಲು

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ.

ಚುನಾವಣೆ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ಹಾಗೂ ಮುಡಾ ಅಕ್ರಮ ವಿಚಾರವಾಗಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಚುನಾವಣಾ ಆಯೋಗಕ್ಕೆ ಈ ದೂರು ನೀಡಿದ್ದಾರೆ.

 

2018ರ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ ಎಂದು ನಮೂದಿಸಿದ್ದರು. ಆದರೆ 2005ರಲ್ಲಿಯೇ ಈ ಜಮೀನು ಪರಿವರ್ತನೆ ಮಾಡಿಸಿದ್ದಾಗಿ ದಾಖಲೆ ನೀಡಿ ದೂರು ಸಲ್ಲಿಸಲಾಗಿದೆ.

2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್ ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಲಾಗಿದೆ. 14 ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ಸಿದರಾಮಯ್ಯ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮತ್ತೊಂದು ದೂರು ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ